- Advertisement -
- Advertisement -


ಮಂಗಳೂರು, ಆ.2: ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಬಂಧಿ ಕೊಠಡಿಯಿಂದ POCSO (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಪ್ರಕರಣದ ವಿಚಾರಣಾಧೀನ ಕೈದಿ ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ POCSO ಪ್ರಕರಣದ ಆರೋಪಿ ರೋಶನ್ ಫೆರ್ನಾಂಡಿಸ್ (36) ಅವರನ್ನು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಬಂಧಿ ಕೊಠಡಿಗೆ ಭದ್ರತೆಗೆ ನಿಯೋಜಿಸಲಾಗಿದ್ದ ಪೊಲೀಸರ ಕಣ್ತಪ್ಪಿಸಿ ಅವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿ ಮೂಲತಃ ಮೂಡುಬಿದಿರೆ ತಾಲೂಕಿನ ವಿಶಾಲನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಈತನ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ POCSO ಪ್ರಕರಣ ದಾಖಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
- Advertisement -








