Monday, June 29, 2026
spot_imgspot_img
spot_imgspot_img

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ -– ಪ್ರಕರಣ ದಾಖಲು

- Advertisement -
- Advertisement -

ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ರೋಗಿಯ ಪುತ್ರನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಡಿಂಬಾಳದ ಕೇವಳ ನಿವಾಸಿ ಗೋವರ್ಧನ ಗೌಡ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿ. ಗೋವರ್ಧನ ಅವರ ತಂದೆ ಶಾಂತರಾಮ ಗೌಡ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು, ಜೂ.25ರಂದು ಶಾಂತರಾಮ ಗೌಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದು ಕೊಂಡು ಹೋಗಬೇಕೆಂದು ಕರ್ತವ್ಯದಲ್ಲಿದ್ದ ಡಾ. ಯೋಗೀಶ್ ಕೆ ಅವರು ರೋಗಿಯ ಪುತ್ರ ಗೋವರ್ಧನ ಗೌಡ ಅವರಿಗೆ ಸೂಚಿಸಿದಾಗ ಗೋವರ್ಧನ ಗೌಡ ಅವರು ಸುಮಾರು ಒಂದೂವರೆ ಗಂಟೆಗೂ ಹೆಚ್ಚಿನ ಕಾಲ ವೈದ್ಯರೊಂದಿಗೆ ಗಲಾಟೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.

ಈ ಕುರಿತು ಡಾ.ಯೋಗೀಶ್ ಅವರು ನೀಡಿದ ದೂರಿನಂತೆ ಪೊಲೀಸರು ಗೋವರ್ಧನ ಗೌಡ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!