Thursday, July 16, 2026
spot_imgspot_img
spot_imgspot_img

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

- Advertisement -
- Advertisement -

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಲಿ ಹೆಣ್ಣು ಮಗಳು ಬರ್ಬರ ಹತ್ಯೆ ಖಂಡನೀಯ ಮತ್ತು ನೋವಿನ ಸಂಗತಿಯಾಗಿದೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬ ಯುವತಿಯ ಜೀವವನ್ನು ಬಲಿ ಪಡೆದಿರುವ ಈ ಘಟನೆ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾಧ್ಯಕ್ಷ ಕಾರ್ತಿಕ್ ರೈ ಪತ್ರಿಕಾ ಮತ್ತು ಮಾಧ್ಯಮ ಪ್ರಕಟಣೆ ಮೂಲಕ ಸಂತಾಪ ಸೂಚಿಸಿದ್ದಾರೆ.ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಮತ್ತು ಹತ್ಯೆ ಘಟನೆಗಳು ಅತ್ಯಂತ ಖಂಡನೀಯ ಮತ್ತು ಆತಂಕಕಾರಿ ಬೆಳವಣಿಗೆಗಳಾಗಿವೆ.

ಈ ದುರ್ಘಟನೆಯಿಂದ ಕುಟುಂಬಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಯುವತಿಯರು ಸುರಕ್ಷಿತವಾಗಿ ಸಂಚರಿಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಕೆಲವೇ ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ನಡೆದ ಈ ಎರಡು ಘಟನೆಗಳು ಕಾನೂನು ಸುವ್ಯವಸ್ಥೆ ಹಾಗೂ ಮಹಿಳಾ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಪೊಲೀಸ್ ಇಲಾಖೆ ಈ ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಆರೋಪಿಗಳನ್ನು ಬಂಧಿಸಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಮಹಿಳೆಯರ ವಿರುದ್ಧದ ಅಪರಾಧಗಳನ್ನು ತಡೆಯಲು ಬಸ್ ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.ಮಹಿಳೆಯರ ಸುರಕ್ಷತೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ; ಅದು ಸಮಾಜ ಮತ್ತು ಆಡಳಿತದ ಸಮಗ್ರ ಹೊಣೆಗಾರಿಕೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ ಯವರು ಆಗ್ರಹಿಸಿದರು.

- Advertisement -

Related news

error: Content is protected !!