
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ದ.ಕ. ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ವಿಟ್ಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ 17ರ ವಯೋಮಾನದ ಬಾಲಕ-ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ವಿಟ್ಠಲ ಪದವಿ ಪೂರ್ವ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.ಪಂದ್ಯಾವಳಿಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರು ಉದ್ಘಾಟಿಸಿದರು. ವಿಟ್ಠಲ ಎಜುಕೇಷನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರವಿಪ್ರಕಾಶ್ ವಿಟ್ಲ, ನಿವೃತ್ತ ಎಎಸ್‌ಐ ಜಗನ್ನಾಥ ಶೆಟ್ಟಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕಾನತ್ತಡ್ಕ, ಟಿಪಿಇಐ ಆಶಾ ನಾಯಕ್, ವಿಟ್ಠಲ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಶಂಕರನಾರಾಯಣ ಪ್ರಸಾದ್, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಐಟಿಐ ಪ್ರಾಂಶುಪಾಲ ರಮೇಶ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪ್ರತಿಭಾನ್ವಿತ ಕಬಡ್ಡಿ ಆಟಗಾರರಾದ ವಿಶ್ವನಾಥ ಅಳಿಕೆ, ಭರತ್ ಶೆಟ್ಟಿ, ವಿಶ್ವರಾಜ್, ಮಹಮ್ಮದ್ ಇಕ್ಬಾಲ್, ಧ್ಯಾನ್, ರಾಮಣ್ಣ ಪಿಲಿಂಜ, ವಸುಧಾ ಭಟ್ ಹಾಗೂ ದೈಹಿಕ ಶಿಕ್ಷಕರಾದ ಸುರೇಶ್ ಶೆಟ್ಟಿ, ವಿದ್ಯಾಶಂಕರ್ ಮತ್ತು ರಾಜೇಂದ್ರ ರೈ ಅವರನ್ನು ಗೌರವಿಸಲಾಯಿತು.
ಉಪ ಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್ ಪ್ರಸ್ತಾವನೆಗೈದರು. ಶಿಕ್ಷಕ ಶ್ರೀಹರಿ ವಂದಿಸಿದರು. ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿಜಯ್ ಅತ್ತಾಜೆ ಹಾಗೂ ರಮೇಶ್ ಬಿ.ಕೆ. ಸಹಕರಿಸಿದರು.








