


ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ (ಪಿಜಿ) ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ.

ಒಟ್ಟು 4,388 ಸೀಟುಗಳ ಪೈಕಿ 3,268 ಸೀಟುಗಳನ್ನು ಹಂಚಿಕೆ ಮಾಡಲಾಗಿದ್ದು, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ, ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನ.11ರವರೆಗೆ ತಮ್ಮ ಆಯ್ಕೆಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಯ್ಕೆ-1 ಮತ್ತು ಆಯ್ಕೆ-2 ದಾಖಲಿಸಿರುವ ಅಭ್ಯರ್ಥಿಗಳು ನ.11ರೊಳಗೆ ಚಲನ್ ಡೌನ್ಲೋಡ್ ಮಾಡಿಕೊಂಡು, ನ.12ರೊಳಗೆ ಶುಲ್ಕ ಪಾವತಿಸಬೇಕು. ಆಯ್ಕೆ-1 ದಾಖಲಿಸಿರುವ ಅಭ್ಯರ್ಥಿಗಳು ಶುಲ್ಕ ಪಾವತಿಸಿದ ಬಳಿಕ ನ.13ರೊಳಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ನಂತರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನ.14ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.







