- Advertisement -
- Advertisement -

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಶುಭರಾಜ್ ಪುಸಲಾಯಿಸಿ, ಬಲವಂತವಾಗಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದ ಎಂದು ದೂರಲಾಗಿದೆ.
ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಆಕೆಯ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ ಗರ್ಭಿಣಿ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನ ಜು.18ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್ ನನ್ನು ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ
- Advertisement -








