Thursday, June 4, 2026
spot_imgspot_img
spot_imgspot_img

ಮನೆ ಕಳ್ಳತನ ಪ್ರಕರಣ ಭೇದಿಸಿದ ಬಂಟ್ವಾಳ ಪೊಲೀಸರು: ಇಬ್ಬರ ಬಂಧನ- ₹2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳವಾದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 71/2026, ಕಲಂ 303(2) ಬಿಎನ್‌ಎಸ್-2023ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಬಂಟ್ವಾಳದ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ (18) ಹಾಗೂ ಮಂಗಳೂರು ಸುರತ್ಕಲ್ ನಿವಾಸಿ ಕಿಶಾನ್ (22) ಅವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಟ್ಟು ₹2.50 ಲಕ್ಷ ಮೌಲ್ಯದ 21 ಗ್ರಾಂ ಚಿನ್ನಾಭರಣ ಹಾಗೂ ₹600 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಎಎಸ್‌ಐ ನವೀನ್ ಅವರ ನೇತೃತ್ವದಲ್ಲಿ ಹೆಡ್ ಕಾನ್‌ಸ್ಟೇಬಲ್‌ಗಳಾದ ಸುರೇಶ್ ಕುಮಾರ್, ರಾಜೇಶ್, ರಕ್ಷೀತ್ ಹಾಗೂ ಕಾನ್‌ಸ್ಟೇಬಲ್‌ಗಳಾದ ಬಸವರಾಜ ಕುಡಗುಂಟಿ, ನಾಗನಾಥ, ಮಹಿಳಾ ಪೊಲೀಸ್ ಸಿಬ್ಬಂದಿಗಳಾದ ರೇವತಿ, ಭಾಗ್ಯಮ್ಮ ಮತ್ತು ಮಾಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ಆರೋಪಿ ಪತ್ತೆ ಕಾರ್ಯದಲ್ಲಿ ಜಿಲ್ಲಾ ಬೆರಳಚ್ಚು ಘಟಕದ ಸಚಿನ್ ಮತ್ತು ಉದಯ್ ಹಾಗೂ ಜಿಲ್ಲಾ ಗಣಕಯಂತ್ರ ವಿಭಾಗದ ದಿವಾಕರ್ ಮತ್ತು ಸಂಪತ್ ಸಹಕರಿಸಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!