Sunday, November 8, 2026
spot_imgspot_img
spot_imgspot_img

ಎಥೆನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಸಮಸ್ಯೆ: ಕೇಂದ್ರ ಸರಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ : ಡಿ.ಕೆ. ಶಿವಕುಮಾರ್

- Advertisement -
- Advertisement -

ಬೆಂಗಳೂರು: ಪೆಟ್ರೋಲ್‌ನಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಆರೋಪ ಹಾಗೂ ಇದರಿಂದ ವಾಹನಗಳ ಎಂಜಿನ್ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಕುರಿತು ಕೇಂದ್ರ ಸರಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.ರಾಜ್ಯದಾದ್ಯಂತ 67 ಸ್ಥಳಗಳಲ್ಲಿ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಲಾಗಿದೆ. ವಾಹನಗಳ ಮೈಲೇಜ್ ಕಡಿಮೆಯಾಗುವುದು, ಎಂಜಿನ್ ಸಮಸ್ಯೆ ಕಾಣಿಸಿಕೊಳ್ಳುವುದು ಹಾಗೂ ಚಲಿಸುತ್ತಿರುವಾಗಲೇ ವಾಹನಗಳು ಸ್ಥಗಿತಗೊಳ್ಳುತ್ತಿರುವ ಬಗ್ಗೆ ಸಾವಿರಾರು ವಾಹನ ಸವಾರರಿಂದ ದೂರುಗಳು ಬಂದಿವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪೆಟ್ರೋಲ್ ಬಂಕ್‌ಗಳಲ್ಲಿ ಮಾತ್ರವಲ್ಲದೆ ಎಥೆನಾಲ್ ಮಿಶ್ರಣ ಮಾಡುವ ಸ್ಥಳಗಳು ಹಾಗೂ ಇಂಧನ ವಿತರಣಾ ವ್ಯವಸ್ಥೆಯ ವಿವಿಧ ಹಂತಗಳಲ್ಲೂ ಪರಿಶೀಲನೆ ನಡೆಸಲಾಗಿದೆ. ಎಲ್ಲಿ ಮತ್ತು ಹೇಗೆ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದರು.ಪೆಟ್ರೋಲ್‌ನಲ್ಲಿ ಶೇ.31.5ರಷ್ಟು ಎಥೆನಾಲ್ ಮಿಶ್ರಣವಾಗುತ್ತಿದೆ ಎಂಬ ದೂರುಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಕಡಿಮೆ ಬೆಲೆಗೆ ಲಭ್ಯವಾಗುವ ಎಥೆನಾಲ್‌ನಿಂದ ಲಾಭ ಪಡೆಯುವ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಹಾಗೂ ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಈ ವಿಚಾರದಲ್ಲಿ ಕೇಂದ್ರ ಸರಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಅವರು ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪೆಟ್ರೋಲ್ ಮಾದರಿಗಳ ಪರಿಶೀಲನೆಗೆ ಸಂಬಂಧಿಸಿದ ಸಂಪೂರ್ಣ ವರದಿ ಹಾಗೂ ಮುಂದಿನ ಕ್ರಮಗಳ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್ ಅವರು ಸೋಮವಾರ ವಿವರವಾದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದೇ ವೇಳೆ ಸಾರ್ವಜನಿಕ ಹಿತಾಸಕ್ತಿಯ ಈ ಗಂಭೀರ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ ಅವರು, ಜನರ ಸಮಸ್ಯೆಗಳ ಬಗ್ಗೆ ಎಲ್ಲರೂ ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

- Advertisement -

Related news

error: Content is protected !!