- Advertisement -
- Advertisement -
ಕೇಪು: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಕೇಪು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಕೋಡಂದೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಭವ್ಯ ಮೆರವಣಿಗೆ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಪಡಿಬಾಗಿಲು, ಗೌರವಾಧ್ಯಕ್ಷ ಪ್ರಕಾಶ್ ರೈ ಕಲ್ಲಂಗಳ, ಕೋಶಾಧಿಕಾರಿ ಬಾಲಕೃಷ್ಣ ಶೆಟ್ಟಿ ಬೆಂಗ್ರೋಡಿ ಹಾಗೂ ಕಾರ್ಯದರ್ಶಿ ಉಮೇಶ್‌ಗೌಡ ಕೊರತಿಗದ್ದೆ ಉಪಸ್ಥಿತರಿದ್ದರು.
ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೋಷಕರು, ಎಸ್‌ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಟ್ರಸ್ಟಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ ‘ಆಟಿಡೋಂಜಿ ದಿನ’ ಕಾರ್ಯಕ್ರಮವೂ ನಡೆಯಿತು.
- Advertisement -








