Friday, April 19, 2024
spot_imgspot_img
spot_imgspot_img

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಹಲವು ಸಿನಿಮಾಗಳಿಗೆ ರಾಷ್ಟ್ರ ಗರಿ

- Advertisement -G L Acharya panikkar
- Advertisement -

2020ನೇ ಸಾಲಿನ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಭಾಷೆಗಳ 300 ಫೀಚರ್​ ಫಿಲ್ಮ್​, 150 ನಾನ್​-ಫೀಚರ್​ ಫಿಲ್ಮ್​ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು. ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ.

‘ಡೊಳ್ಳು’ ಸಿನಿಮಾ ‘ಕನ್ನಡದ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದಿದೆ. ಈ ಚಿತ್ರಕ್ಕೆ ಸಾಗರ್​ ಪುರಾಣಿಕ್​ ನಿರ್ದೇಶನ ಮಾಡಿದ್ದು, ಪವನ್​ ಒಡೆಯರ್​ ಮತ್ತು ಅಪೇಕ್ಷಾ ಪುರೋಹಿತ್​ ನಿರ್ಮಾಣ ಮಾಡಿದ್ದಾರೆ. ‘ದ ಲಾಂಗೆಸ್ಟ್​ ಕಿಸ್’​ ಪುಸ್ತಕಕ್ಕೆ ‘ಸಿನಿಮಾ ಕುರಿತು ಅತ್ಯುತ್ತಮ ಕೃತಿ’ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ಪಡೆದುಕೊಂಡಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿ:

  • ಅತ್ಯುತ್ತಮ ನಟ: ಅಜಯ್​ ದೇವಗನ್​ ಮತ್ತು ಸೂರ್ಯ
  • ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ
  • ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
  • ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು
  • ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ
  • ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್​ ಕೆ.ಆರ್​.
  • ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ
  • ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ
  • ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್​, ಸುಧಾ ಕೊಂಗರು (ಸೂರರೈ ಪೋಟ್ರು)
  • ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)
  • ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್​ ದೇಶಪಾಂಡೆ (ಮಿ ವಸಂತ್​ ರಾವ್​)
  • ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)
  • ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)
  • ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ
ಸೂರ್ಯ , ಅಪರ್ಣಾ ಬಾಲಮುರಳಿ , ಅಜಯ್​ ದೇವಗನ್​
- Advertisement -

Related news

error: Content is protected !!