Wednesday, August 12, 2026
spot_imgspot_img
spot_imgspot_img

ಯು.ಟಿ.ಖಾದರ್ ಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್‌ ಇಲಾಖೆ ಜವಾಬ್ದಾರಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಸಚಿವ ಸಂಪುಟದಲ್ಲಿ ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಚುರುಕುಗೊಂಡಿದೆ.

ಈ ಮಧ್ಯೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿರುವ ಯು.ಟಿ.ಖಾದ‌ರ್ ಅವರಿಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಇಲಾಖೆಯ ಜವಾಬ್ದಾರಿ ವಹಿಸಲಾಗಿದೆ.ಈ ಹಿಂದೆ ಆರೋಗ್ಯ ಸಚಿವರಾಗಿ, ವಿಧಾನಸಭೆಯ ಸ್ಪೀಕರ್ ಆಗಿ ತನ್ನದೇ ಛಾಪು ಮೂಡಿಸಿರುವ ಯು.ಟಿ.ಖಾದ‌ರ್ ಅವರು ಡಿ.ಕೆ.ಶಿವಕುಮಾ‌ರ್ ಸಚಿವ ಸಂಪುಟದಲ್ಲಿ ಮೊದಲ ಹಂತದಲ್ಲೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಬಳಿಕ ಆರೋಗ್ಯ ಸಚಿವರಾಗಿ ನಿಯುಕ್ತಿಗೊಂಡಿದ್ದರು.ಈ ಕುರಿತು ಸರಕಾರದ ಅಧಿಕೃತ ಪ್ರಕಟಣೆ ಇನ್ನಷ್ಟೇ ಬರಬೇಕಿದೆ.

- Advertisement -

Related news

error: Content is protected !!