Tuesday, July 21, 2026
spot_imgspot_img
spot_imgspot_img

ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಪರಿಚಯ: ₹87.22 ಲಕ್ಷ ವಂಚನೆ; ಬೆಳ್ತಂಗಡಿಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾದ ಮಹಿಳೆಯೊಬ್ಬಳು ವಿವಿಧ ಕಾರಣಗಳನ್ನು ನೀಡಿ ಹಂತಹಂತವಾಗಿ ₹87.22 ಲಕ್ಷ ಹಣ ಪಡೆದು ವಂಚನೆ ಎಸಗಿದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿಯಾಗಿರುವ ದೂರುದಾರರು ವ್ಯವಹಾರ ನಡೆಸುತ್ತಿದ್ದು, 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಅನಿಷಾ ಪಾಲನ್ನ (35) ಎಂಬಾಕೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು.ದೂರುದಾರರ ಪ್ರಕಾರ, 2024ರ ಸೆಪ್ಟೆಂಬರ್ 26ರಿಂದ 2025ರ ಜನವರಿ 20ರವರೆಗೆ ಆರೋಪಿತೆ ವಿವಿಧ ಕಾರಣಗಳನ್ನು ನೀಡಿ ಹಂತಹಂತವಾಗಿ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಒಟ್ಟು ₹87,22,710 ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾಳೆ.

ನಂತರ ಆರೋಪಿತೆ ಮೊಬೈಲ್ ಸಂಪರ್ಕಕ್ಕೆ ಸಿಗದೇ, ಪಡೆದ ಹಣವನ್ನು ಹಿಂತಿರುಗಿಸದೆ ವಂಚನೆ ಎಸಗಿರುವುದಾಗಿ ದೂರು ನೀಡಲಾಗಿದೆ.ಈ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 78/2026ರಡಿ ಬಿಎನ್‌ಎಸ್ ಕಲಂ 318(4) ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!