- Advertisement -
- Advertisement -
ಪುತ್ತೂರು: ಜುಲೈ 18ರಂದು ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಫಾತಿಮತ್ ನಿಶಾನಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಲಕ್ಷ ಪರಿಹಾರ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಾಸಕ ಅಶೋಕ್ ರೈ, ನಿಶಾನಾ ಅವರ ಸಾವಿನ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಮನವಿ ಸಲ್ಲಿಸಿದರು.ಮೃತ ನಿಶಾನಾ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಅವರಿಗೆ ಮೂರು ವರ್ಷದ ಮಗು ಇರುವುದನ್ನು ಹಾಗೂ ಕುಟುಂಬ ದುಃಖದಲ್ಲಿರುವ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ₹3 ಲಕ್ಷ ಪರಿಹಾರವನ್ನು ಮಂಜೂರು ಮಾಡಿದ್ದು, ಕೆಲವೇ ದಿನಗಳಲ್ಲಿ ಈ ಮೊತ್ತ ನಿಶಾನಾ ಅವರ ಕುಟುಂಬದ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
- Advertisement -








