- Advertisement -
- Advertisement -

ವಿಟ್ಲ : ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ಆಶ್ರಯದಲ್ಲಿ ಲಯನ್ಸ್ ಸಂಸ್ಥಾಪಕ ಮೆಲ್ವಿನ್ ಜೋನ್ಸ್ ಅವರ ಪುತ್ಥಳಿಯನ್ನು ಪಾಸ್ಟ್ ಇಂಟರ್ನ್ಯಾಷನಲ್ ಡೈರೆಕ್ಟರ್ ಜೆ.ಪಿ. ಸಿಂಗ್ ಅನಾವರಣಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಜಿಲ್ಲೆ 317ಡಿ ಜಿಲ್ಲಾ ಗವರ್ನರ್ ಕುಡುಪಿ ಅರವಿಂದ್ ಶೆಣೈ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಸಂಪುಟ ಕಾರ್ಯದರ್ಶಿ ಚಂದ್ರೇಗೌಡ ಎಚ್.ಆರ್., ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿಆರ್‌ಒ ಸುದರ್ಶನ್ ಪಡಿಯಾರ್ (ವಿಟ್ಲ), ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ್ ರೈ (ಮೂಡಬಿದ್ರೆ) ಹಾಗೂ ಲಯನ್ಸ್ ಸೇವಾ ಟ್ರಸ್ಟ್‌ನ ಅಧ್ಯಕ್ಷ ಶಿವಪ್ರಸಾದ್ ಹೆಗಡೆ ಉಪಸ್ಥಿತರಿದ್ದರು.ಮೂಡಬಿದ್ರೆ ಲಯನ್ಸ್ ಕ್ಲಬ್ ಅಧ್ಯಕ್ಷ ರಿಚರ್ಡ್ ಕಾರ್ಡೋಜ ಕಾರ್ಯಕ್ರಮವನ್ನು ಸ್ವಾಗತಿಸಿ, ಕ್ಲಬ್‌ನ ಸದಸ್ಯರು, ಪದಾಧಿಕಾರಿಗಳು, ಜಿಲ್ಲಾ ನಾಯಕರು ಹಾಗೂ ಹಲವು ಮಾಜಿ ಜಿಲ್ಲಾ ಗವರ್ನರ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- Advertisement -








