- Advertisement -
- Advertisement -



ಕಾಸರಗೋಡು: ಭಾರಿ ಮಳೆಗೆ ಶಾಲೆಯ ಆವರಣದಲ್ಲಿ ಮರ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ.
ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 6ನೇ ತರಗತಿಯ ಆಯಿಷತ್ ಮಿನ್ಹಾ ಅಸುನೀಗಿದ ವಿದ್ಯಾರ್ಥಿನಿ. ಶಾಲೆಯಲ್ಲಿ ತರಗತಿ ಮುಗಿದ ಬಳಿಕ ಸಂಜೆ ವೇಳೆ ಆಯಿಷತ್ ಮಿನ್ಹಾ ಮತ್ತು ಆಕೆಯ ಇಬ್ಬರು ಸ್ನೇಹಿತರ ಜೊತೆಗೆ ಶಾಲಾ ಬಸ್‌ಗೆ ನಡೆದುಕೊಂಡು ಹೋಗುತ್ತಿದ್ದಾಗ ಮರ ಒಂದು ಬಿದ್ದು, ಅದರ ಕೊಂಬೆಯೊಂದು ಆಯಿಷತ್ ತಲೆಯ ಮೇಲೆ ಬಿದ್ದಿದೆ ಎಂದು ಶಾಲೆಯ ಶಿಕ್ಷಕರೊಬ್ಬರು ತಿಳಿಸಿದ್ದಾರೆ.
ಬಳಿಕ ಆಕೆಯನ್ನು ಶಿಕ್ಷಕರು ಕುಂಬಳದ ಸಹಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಅವಘಡದಲ್ಲಿ ಆಕೆಯ ಜೊತೆಗಿದ್ದ ಉಳಿದ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -