Sunday, August 16, 2026
spot_imgspot_img
spot_imgspot_img

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಸಾವಿನ ಸಂಖ್ಯೆ 40ಕ್ಕೆ ಏರಿಕೆ

- Advertisement -
- Advertisement -

ಜಕಾರ್ತಾ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಮತ್ತು ಮನೆಗಳು ತೀವ್ರ ಹಾನಿಗೊಳಗಾಗಿವೆ.

ಇಂಡೋನೇಷ್ಯಾ ಸಮಯ ಬೆಳಗ್ಗೆ 5:58 ಕ್ಕೆ ಫ್ಲೋರ್ಸ್ ಪ್ರದೇಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಪ್ರಬಲ ಭೂಕಂಪಕ್ಕೆ ಕಟ್ಟಡಗಳು ಕುಸಿದು ಬೀಳುತ್ತಿದ್ದಂತೆ ಜನರು ಭಯಭೀತರಾಗಿ ಓಡುತ್ತಿರುವ ದೃಶ್ಯದ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಇಂಡೋನೇಷ್ಯಾದ ಹವಾಮಾನಶಾಸ್ತ್ರ ಮತ್ತು ಭೂ ಭೌತಶಾಸ್ತ್ರ ಸಂಸ್ಥೆ (ಬಿಎಂಕೆಜಿ) ಭೂಕಂಪದ ನಂತರ ಸುನಾಮಿ ಅಲೆಗಳು ಏಳಬಹುದಾದ ಸಾಧ್ಯತೆಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿತ್ತು. ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಿತ್ತು. ನಂತರ ಸುನಾಮಿ ಎಚ್ಚರಿಕೆಯನ್ನು ಹಿಂತೆಗೆದುಕೊಳ್ಳಲಾಯಿತು.

1992 ರಲ್ಲಿ ಇಂಡೋನೇಷ್ಯಾದ ಪೂರ್ವ ಭಾಗದಲ್ಲಿರುವ ದ್ವೀಪಗಳ ಗುಂಪಿನ ಭಾಗವಾಗಿರುವ ಆಗ್ನೇಯ ಫ್ಲೋರ್ಸ್ ದ್ವೀಪದಲ್ಲಿ 7 ತೀವ್ರತೆಯ ಭೂಕಂಪ ಸಂಭವಿಸಿತ್ತು. ಆಗ ಸುಮಾರು 2,500 ಜನರು ಸಾವಿಗೀಡಾಗಿದ್ದರು.

- Advertisement -

Related news

error: Content is protected !!