Wednesday, May 8, 2024
spot_imgspot_img
spot_imgspot_img

ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್‌ನಲ್ಲಿ ನಡೆದಿದೆ.

ಸೂರತ್‌ನ ಪಾಲನ್‌ಪುರ ಜಕತ್ವಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಹೇಳಿದ್ದಾರೆ.

6 ಮಂದಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ಒಬ್ಬರು ನೇಣುಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಮನೀಶ್ ಸೋಲಂಕಿ, ಅವರ ಪತ್ನಿ ರೀಟಾ, ಅವರ ತಂದೆ ಕಾನು, ಅವರ ತಾಯಿ ಶೋಭಾ ಮತ್ತು ಮೂವರು ಮಕ್ಕಳಾದ ದಿಶಾ, ಕಾವ್ಯ ಮತ್ತು ಕುಶಾಲ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಫರ್ನಿಚರ್ ವ್ಯವಹಾರವನ್ನು ಮಾಡುತ್ತಿದ್ದ ಮನೀಶ್ ಸೋಲಂಕಿ ಕೆಲಸಗಾರರು ಕರೆ ಮಾಡಿದ್ದಾರೆ. ಆದರೆ ಕರೆ ಸ್ವೀಕರಿಸದಿದ್ದಾಗ ಮನೆಯ ಬಳಿಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿತ್ತು ಎಂದು ಬರೆದಿರುವ ಪತ್ರವನ್ನು ಪೊಲೀಸರು ಘಟಾನ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ಥಿಕ ಸಮಸ್ಯೆಯಿಂದಲೇ ಆತ್ಮಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ಹಿಂದಿನ ನಿಖರ ಕಾರಣ ತನಿಖೆ ಬಳಿಕವಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!