Monday, July 27, 2026
spot_imgspot_img
spot_imgspot_img

ದೇಶದಲ್ಲಿ 70 ಸಾವಿರ ಆಯುಷ್ಮಾನ್‌ ಭಾರತ್‌‌ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ- ಕೇಂದ್ರಆರೋಗ್ಯ ಸಚಿವಾಲಯ

- Advertisement -
- Advertisement -

ನವದೆಹಲಿ: ಪ್ರಾಥಮಿಕ ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಿದ್ದು, ನಿಗದಿತ ಸಮಯಕ್ಕಿಂತ ಮುಂಚಿತವಾಗಿ 70 ಸಾವಿರ ಆಯುಷ್ಮಾನ್‌‌‌ ಭಾರತ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.

ಇಲ್ಲಿಯವರೆಗೆ ಭಾರತ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಲ್ಲಿ ಸುಮಾರು 41.35 ಕೋಟಿ ಮಂದಿ ಸೇವೆ ಪಡೆದುಕೊಂಡಿದ್ದು, ಈ ಪೈಕಿ ಶೇ.54ರಷ್ಟು ಮಹಿಳೆಯರು ಒಳಗೊಂಡಿದ್ದಾರೆ ಎಂದು ತಿಳಿಸಿದೆ.

ಕೊರೊನಾದ ನಡುವೆಯೂ ಪ್ರಾಥಮಿಕ ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸುವ ಸಾಧನೆ ಮಾಡಿದೆ. ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಹಯೋಗದಿಂದ ಈ ಕಾರ್ಯ ಸಾಧ್ಯವಾಗಿದೆ ಎಂದು ಸಚಿವಾಲಯ ಹೇಳಿದೆ.

ಎಪ್ರಿಲ್‌ 8ರಂದು ಆಯುಷ್ಮಾನ್‌ ಭಾರತ ಆರೋಗ್ಯ ಹಾಗೂ ಕ್ಷೇಮ ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಆರಂಭಿಸಲಾಯಿತು. 2022ರ ಡಿಸೆಂಬರ್‌ ತಿಂಗಳ ವೇಳೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು 1.50 ಲಕ್ಷ ಉಪ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆಯುಷ್ಮಾನ್‌ ಭಾರತ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಹೇಳಿದೆ.

ಪ್ರಸ್ತುತ ಇರುವ ಆರೋಗ್ಯ ಸೇವೆಗಳೊಂದಿಗೆ ಕಿವಿ, ಗಂಟಲು, ನೇತ್ರ ಚಿಕಿತ್ಸೆ, ಮಾನಸಿಕ ಆರೋಗ್ಯ ಹಾಗೂ ಮೂಗಿಗೆ ಸಂಬಂಧಿಸಿದ ಚಿಕಿತ್ಸೆಗಳನ್ನು ಈ ಕೇಂದ್ರದಲ್ಲಿ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!