Friday, July 17, 2026
spot_imgspot_img
spot_imgspot_img

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು, ಪ್ರಚೋದನಾತ್ಮಕ ಪೋಸ್ಟ್: ಬಂಟ್ವಾಳದಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಸಮಾಜದ ಶಾಂತಿ ಕದಡುವ ರೀತಿಯ ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ಆರೋಪದಡಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಂಟ್ವಾಳ ನಗರ ಠಾಣೆಯಲ್ಲಿ ಈಗಾಗಲೇ ದಾಖಲಾಗಿರುವ ಅಪರಾಧ ಸಂಖ್ಯೆ 95/2026ಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮ ಅಳವಡಿಸಿ, ಭಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಿ ವಿವಿಧ ವಾಟ್ಸ್ಆಪ್ ಗುಂಪುಗಳು ಮತ್ತು ಇನ್‌ಸ್ಟಾಗ್ರಾಂ ಖಾತೆಗಳ ಮೂಲಕ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹರಿಬಿಡಲಾಗಿದೆ ಎನ್ನಲಾಗಿದೆ.

ಈ ಸಂಬಂಧ troll_master.__ ಇನ್‌ಸ್ಟಾಗ್ರಾಂ ಖಾತೆ, Yuva Belthangady, PPadmaraj Padmarajpari, Padmaraj Padmaraj Pari, Yuva Congress Belthangady ಹಾಗೂ Facts and Justice ವಾಟ್ಸ್ಆಪ್ ಗುಂಪುಗಳ ವಿರುದ್ಧ ಅಪರಾಧ ಸಂಖ್ಯೆ 96/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 196 ಹಾಗೂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಇನ್ನೊಂದು ಪ್ರಕರಣದಲ್ಲಿ, Shailaja Amarnath ಎಂಬ ಫೇಸ್‌ಬುಕ್ ಖಾತೆಯಲ್ಲಿ ಸುಳ್ಳು ಮಾಹಿತಿ ಹಾಗೂ ಸಮಾಜದ ಶಾಂತಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್ ಪ್ರಕಟಿಸಿರುವ ಆರೋಪದಡಿ ಅಪರಾಧ ಸಂಖ್ಯೆ 97/2026ರಡಿ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ರೀತಿ, Chethan Belchada ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೆ ಮಾಡಿರುವ ಆರೋಪದಡಿ ಅಪರಾಧ ಸಂಖ್ಯೆ 98/2026ರಡಿ ಕಲಂ 353(2) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಈ ಮೂರು ಪ್ರಕರಣಗಳ ಕುರಿತು ತನಿಖೆ ಮುಂದುವರಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!