Tuesday, October 6, 2026
spot_imgspot_img
spot_imgspot_img

15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೆ ಹಾಗೂ ಹಣವನ್ನೂ ಹಿಂತಿರುಗಿಸದೆ ವಂಚಿಸಿದ ಪ್ರಕರಣದಲ್ಲಿ ಸುಮಾರು 15 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. ನಂ.151/2011ರಂತೆ ಐಪಿಸಿ ಕಲಂ 420, 465, 468, 471 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿಬ್ಬಾತುಲ್ಲನನ್ನು ಅ.6ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ ಹಾಗೂ ಯಂಕಪ್ಪ ಅವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!