Sunday, November 15, 2026
spot_imgspot_img
spot_imgspot_img

ರಾಜ್ಯದ ಇಬ್ಬರು IPS, 23 KAS ಅಧಿಕಾರಿಗಳ ವರ್ಗಾವಣೆ; ಮೈಸೂರಿಗೆ ನೂತನ ಪೊಲೀಸ್ ಆಯುಕ್ತರ ನೇಮಕ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರದಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಇಬ್ಬರು ಐಪಿಎಸ್ ಹಾಗೂ 23 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಸೂಚಿಸಿದೆ.ಮೈಸೂರಿಗೆ ನೂತನ ಪೊಲೀಸ್ ಆಯುಕ್ತರ ನೇಮಕಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್. ವಿಷ್ಣುವರ್ಧನ ಅವರನ್ನು ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಇವರು ಈ ಹಿಂದೆ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಆಯುಕ್ತರುಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿ ಇಸ್ಲಾವುದ್ದೀನ್ ಜೆ. ಗದ್ಯಾಳ್ ಅವರನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಹಾಸನದ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೆ. ಕೃಷ್ಣಮೂರ್ತಿ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ಇದಲ್ಲದೆ, ರಾಜ್ಯದ ವಿವಿಧ ಇಲಾಖೆಗಳು ಹಾಗೂ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಯಲ್ಲಿಯೂ ಬದಲಾವಣೆ ಮಾಡಲಾಗಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೂ ನೂತನ ವ್ಯವಸ್ಥಾಪಕ ನಿರ್ದೇಶಕರ ನೇಮಕ ಸೇರಿದಂತೆ ಹಲವು ಆಡಳಿತಾತ್ಮಕ ಬದಲಾವಣೆಗಳನ್ನು ಸರ್ಕಾರ ಮಾಡಿದೆ.

- Advertisement -

Related news

error: Content is protected !!