- Advertisement -
- Advertisement -


ಕುಂದಾಪುರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕೋಟೇಶ್ವರ-ಹಾಲಾಡಿ ರಸ್ತೆಯ ಕಲ್ಕೆರೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.ತೀರ್ಥಹಳ್ಳಿ ಮೂಲದ ಹರ್ಷ (35) ಮೃತರು ಎಂದು ಗುರುತಿಸಲಾಗಿದೆ.ಹರ್ಷ ಅವರು ಕಮಲಶಿಲೆಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ಆಗಮಿಸಿದ್ದು, ಕಾರ್ಯಕ್ರಮ ಮುಗಿಸಿ ಕೋಟೇಶ್ವರದಿಂದ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು ಢಿಕ್ಕಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಹರ್ಷ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ, ಸಂಚಾರ ಠಾಣೆಯ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -








