Sunday, September 6, 2026
spot_imgspot_img
spot_imgspot_img

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

- Advertisement -
- Advertisement -

ವಿಟ್ಲ: ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರನ್ನು ಗೌರವಿಸಿ, ಶಿಕ್ಷಕರಿಗೆ ಶುಭಾಶಯಗಳನ್ನು ಸಲ್ಲಿಸಿದರು. ಶಿಕ್ಷಕರ ದಿನಾಚರಣೆಯ ವಿಶೇಷತೆಯಾಗಿ ಶಿಕ್ಷಕರಿಗಾಗಿ ವಿವಿಧ ವಿನೋದ ಹಾಗೂ ಮನರಂಜನಾ ಆಟಗಳನ್ನು ಆಯೋಜಿಸಲಾಗಿದ್ದು, ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ಸಂಭ್ರಮಿಸಿದರು.ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸಲ್ಲಿಸಲಾದ ಗೌರವ ಹಾಗೂ ಮನರಂಜನಾ ಕಾರ್ಯಕ್ರಮವು ಶಿಕ್ಷಕರಲ್ಲಿ ಸಂತಸ ಮೂಡಿಸಿತು. ಕಾರ್ಯಕ್ರಮವು ಶಿಕ್ಷಕ-ವಿದ್ಯಾರ್ಥಿಗಳ ನಡುವಿನ ಆತ್ಮೀಯತೆಯನ್ನು ಮತ್ತಷ್ಟು ಬಲಪಡಿಸಿತು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆಯರಾದ ಕವಿತಾ ಕೆ.ಜಿ. ಮತ್ತು ಹೇಮಲತಾ, ಶಾಲೆಯ ಎಲ್ಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!