Wednesday, November 25, 2026
spot_imgspot_img
spot_imgspot_img

ಸೌಜನ್ಯ ಪ್ರಕರಣದ ತನಿಖೆ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೇಲೆಯೇ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ತನಿಖೆಯಲ್ಲಿ ಯಾವುದೇ ಆತುರದ ನಿರ್ಧಾರಕ್ಕೆ ಅವಕಾಶವಿಲ್ಲ. ವೈಜ್ಞಾನಿಕ ದಾಖಲೆಗಳು ಹಾಗೂ ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆಯೇ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು, ಸೌಜನ್ಯ ಪ್ರಕರಣ ನಡೆದು ಸುಮಾರು 14 ವರ್ಷಗಳು ಕಳೆದಿವೆ.

ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಲು ವೈಜ್ಞಾನಿಕ ದಾಖಲೆಗಳು ಮತ್ತು ಸಾಕ್ಷ್ಯಗಳು ಅತ್ಯಂತ ಮಹತ್ವದ್ದಾಗಿವೆ. ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಆದರೆ ತನಿಖೆಗೆ ಸಂಬಂಧಿಸಿದ ಯಾವುದೇ ಕ್ರಮ ಸಾಕ್ಷ್ಯಾಧಾರಗಳ ಆಧಾರದಲ್ಲಿಯೇ ನಡೆಯಬೇಕು ಎಂದು ಹೇಳಿದರು.

- Advertisement -

Related news

error: Content is protected !!