Saturday, September 5, 2026
spot_imgspot_img
spot_imgspot_img

ಪುತ್ತೂರು ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ಘೋಷಣೆ: ಕಾನೂನು ಕ್ರಮಕ್ಕೆ ಆಗ್ರಹ

- Advertisement -
- Advertisement -

ಮಂಗಳೂರು: ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳು ಮೊನ್ನೆ ಪುತ್ತೂರಿನಲ್ಲಿ ಆಯೋಜಿಸಿದ ಮೆರವಣಿಗೆ ಯಲ್ಲಿ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಲಾಗಿದ್ದು, ಕಾರ್ಯಕ್ರಮದ ಆಯೋಜಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಲೀಗ್ ದ.ಕ.ಜಿಲ್ಲಾ ಸಮಿತಿಯ ನಿಯೋಗವು ದ.ಕ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಮೆರವಣಿಗೆಗೆ ಹಲವು ನಿಯಮಗಳನ್ನು ಪಾಲಿಸುವಂತೆ ಆದೇಶ ನೀಡಿದ್ದರೂ ಕೂಡ ಕಾರ್ಯಕ್ರಮ ಸಂಘಟಕರು ಅದನ್ನು ನಿರ್ಲಕ್ಷಿಸಿದ್ದಾರೆ.

ಕಾನೂನು ಪಾಲಕರಾದ ಪೊಲೀಸರಿಗೂ ಧಿಕ್ಕಾರ ಕೂಗಿ ಸಭಾ ವೇದಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಈ ಬಗ್ಗೆ ಕ್ರಮ ಜರುಗಿಸಲು ಲೀಗ್ ನಿಯೋಗ ಆಗ್ರಹಿಸಿದೆ.ಲೀಗ್‌ ಜಿಲ್ಲಾಧ್ಯಕ್ಷ ಸಿ. ಅಬ್ದುಲ್ ರಹಿಮಾನ್, ಕೋಶಾಧಿಕಾರಿ ರಿಯಾಝ್ ಹರೇಕಳ, ಉಪಾಧ್ಯಕ್ಷ ಎಚ್‌. ಮುಹಮ್ಮದ್ ಇಸ್ಮಾಯಿಲ್, ಹಿರಿಯ ಮುಖಂಡ ಕೆ.ಸಿ. ಖಾದರ್ ನಿಯೋಗದಲ್ಲಿದ್ದರು.

- Advertisement -

Related news

error: Content is protected !!