

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಚಾರ್ಟರ್ ನೈಟ್ ಕಾರ್ಯಕ್ರಮ ಇತ್ತೀಚೆಗೆ ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ನಡೆಯಿತು.ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ 317ಡಿ ಜಿ.ಇ.ಟಿ. ಕೋ-ಆರ್ಡಿನೇಟರ್ ಲಯನ್ ಜಗದೀಶ್ ಎಡಪಡಿತಾಯ ಭಾಗವಹಿಸಿ, ನೂತನ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಹಾಗೂ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಶುಭ ಹಾರೈಸಿದರು.

ಚಾರ್ಟರ್ ನೈಟ್ ಕಾರ್ಯಕ್ರಮಕ್ಕೆ ನಿಕಟಪೂರ್ವ ಜಿಲ್ಲಾ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಚಾರ್ಟರ್ ಸದಸ್ಯರನ್ನು ಅಭಿನಂದಿಸಿದರು.ಕಾರ್ಯಕ್ರಮದ ಅಂಗವಾಗಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಪದಗ್ರಹಣ ಅಧಿಕಾರಿ ಜಗದೀಶ್ ಎಡಪಡಿತಾಯ, ಚಿತ್ರ ಎಡಪಡಿತಾಯ, ಚಂದ್ರಹಾಸ ರೈ ಹಾಗೂ ರಮ್ಯಾ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಪಿಆರ್‌ಒ ಸುದರ್ಶನ್ ಪಡಿಯಾರ್, ವಿಟ್ಲ ವಲಯ ಅಧ್ಯಕ್ಷೆ ವೇದಾವತಿ, ಕಾರ್ಯದರ್ಶಿ ದಿನಕರ ಆಳ್ವ, ವಲಯ ನಿರ್ದೇಶಕ ವಸಂತ್ ಶೆಟ್ಟಿ ಎರ್ಮಿನಿಲಿ, ಕೋಶಾಧಿಕಾರಿ ಓ. ಕೃಷ್ಣ, ಮಾಜಿ ರಾಜ್ಯಪಾಲ ಡಾ. ಗೀತ್ ಪ್ರಕಾಶ್ ಕೃಷ್ಣ, ಪ್ರಶಾಂತ್ ಸೇರಿದಂತೆ ವಿವಿಧ ಲಯನ್ಸ್ ಕ್ಲಬ್‌ಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಅಧ್ಯಕ್ಷೆ ಶ್ವೇತಾ ರವಿಕುಮಾರ್ ವಹಿಸಿದ್ದರು. ಕೋಶಾಧಿಕಾರಿ ಸಂದೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.








