Sunday, August 30, 2026
spot_imgspot_img
spot_imgspot_img

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರೆಂಟ್ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಉಪ್ಪಳದ ಪೈವಳಿಕೆ ಟೆಂಪಲ್‌ ಸಮೀಪದ ನಿವಾಸಿ ಮಹಮ್ಮದ್ ತೌಸೀಫ್ (40) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2013ರಡಿ ಭಾರತೀಯ ದಂಡ ಸಂಹಿತೆಯ ಕಲಂ 392ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಆ.29, 2026ರಂದು ಆರೋಪಿಯನ್ನು ಬಂಧಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

- Advertisement -

Related news

error: Content is protected !!