Thursday, May 2, 2024
spot_imgspot_img
spot_imgspot_img

75ನೇ ಸ್ವಾತಂತ್ರ್ಯೋತ್ಸವ ವಿಶೇಷ: 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್‌ನ ಎರಡು ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಭಾನುವಾರ(ಅಕ್ಟೋಬರ್ 16)ದಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಪ್ರಧಾನಿಯವರು ಭಾನುವಾರ ದೇಶಾದ್ಯಂತ ವಿವಿಧ ಬ್ಯಾಂಕ್‌ಗಳ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು (ಡಿಬಿಯು) ಉದ್ಘಾಟಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಉದ್ಘಾಟಿಸಲಿದ್ದು ಒಂದು ಶ್ರೀನಗರದ ಲಾಲ್ ಚೌಕ್‌ನಲ್ಲಿ ಎಸ್‌ಎಸ್‌ಐ ಶಾಖೆ ಮತ್ತು ಇನ್ನೊಂದು ಜಮ್ಮುವಿನ ಚನ್ನಿ ರಾಮ ಶಾಖೆ.

2022-23ರ ಕೇಂದ್ರ ಬಜೆಟ್‌ನ ಭಾಗವಾಗಿ, ಭಾರತ ಸ್ವಾತಂತ್ರ್ಯದ 75 ವರ್ಷಗಳ ಸ್ಮರಣಾರ್ಥವಾಗಿ ದೇಶದ ಹಲವು ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸುವುದಾಗಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಇದನ್ನೂ ಓದಿ: ಜಪಾನಲ್ಲಿ ವಿನ್ಯಾಸಗೊಂಡಿರುವ ಸಿಂಕ್ ಅಳವಡಿತ ವಿನೂತನ ಶೈಲಿಯ ಟಾಯ್ಲೆಟ್ ಸಾಕಷ್ಟು ನೀರನ್ನು ಉಳಿಸುತ್ತದೆ.

ಡಿಜಿಟಲ್ ಬ್ಯಾಂಕಿಂಗ್‌ನ ಪ್ರಯೋಜನಗಳು ದೇಶದ ಮೂಲೆ ಮೂಲೆಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕ ವಲಯದ 11 ಬ್ಯಾಂಕ್‌ಗಳು, ಖಾಸಗಿ ವಲಯದ 12 ಮತ್ತು ಒಂದು ಸಣ್ಣ ಹಣಕಾಸು ಬ್ಯಾಂಕ್ ಈ ಪ್ರಯತ್ನದಲ್ಲಿ ಭಾಗವಹಿಸುತ್ತಿವೆ.

ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಭೌತಿಕ ಮಳಿಗೆಗಳನ್ನು ಹೊಂದಿದ್ದು, DBU ಗಳು ಜನರಿಗೆ ಉಳಿತಾಯ ಖಾತೆ ತೆರೆಯುವುದು, ಖಾತೆಯ ಬ್ಯಾಲೆನ್ಸ್ ಚೆಕ್, ಪ್ರಿಂಟಿಂಗ್ ಪಾಸ್‌ಬುಕ್, ಹಣ ವರ್ಗಾವಣೆ, ಸ್ಥಿರ ಠೇವಣಿ ಹೂಡಿಕೆಗಳು, ಸಾಲದ ಅರ್ಜಿಗಳು, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್‌ಗಳಿಗೆ ಅರ್ಜಿ ಮತ್ತು ಬಿಲ್ ಮತ್ತು ತೆರಿಗೆ ಪಾವತಿಗಳಂತಹ ವಿವಿಧ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತದೆ.

ಏನಿದು ಡಿಜಿಟಲ್ ಬ್ಯಾಂಕಿಂಗ್ ಘಟಕ?

ಡಿಜಿಟಲ್ ಬ್ಯಾಂಕಿಂಗ್ ಘಟಕವು ಡಿಜಿಟಲ್ ಬ್ಯಾಂಕಿಂಗ್ ಉತ್ಪನ್ನಗಳು ಮತ್ತು ಸೇವೆಗಳನ್ನು ತಲುಪಿಸಲು ಹಾಗೂ ಯಾವುದೇ ಸಮಯದಲ್ಲಿ ಸ್ವಯಂ-ಸೇವಾ ಮೋಡ್‌ನಲ್ಲಿ ಅಸ್ತಿತ್ವದಲ್ಲಿರುವ ಹಣಕಾಸು ಉತ್ಪನ್ನಗಳು ಮತ್ತು ಸೇವೆಗಳನ್ನು ಡಿಜಿಟಲ್‌ನಲ್ಲಿ ಪೂರೈಸಲು ಕೆಲವು ಕನಿಷ್ಠ ಡಿಜಿಟಲ್ ಮೂಲಸೌಕರ್ಯವನ್ನು ಹೊಂದಿರುವ ವಿಶೇಷ ಘಟಕವಾಗಿದೆ.

- Advertisement -

Related news

error: Content is protected !!