Thursday, July 23, 2026
spot_imgspot_img
spot_imgspot_img

ಸುಳ್ಯ: ನಿಶಾನ ಸಾವಿನ ಪ್ರಕರಣ: ಮಾವ, ಅತ್ತೆ ಹಾಗೂ ನಾದಿನಿ ಬಂಧನ

- Advertisement -
- Advertisement -


ಸುಳ್ಯ: ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.


ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.100/2026, ಕಲಂ 85, 103(1) ಹಾಗೂ 3(5) ಬಿಎನ್‌ಎಸ್ 2023ರ ಪ್ರಕರಣದ ತನಿಖೆಯ ವೇಳೆ, ಮೃತ ಮಹಿಳೆಯ ಪತಿಯ ಮನೆಯವರ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಮಾವ ಸಿ.ಪಿ. ಅಳವಿ (54), ಅತ್ತೆ ಅಯಿಷಾ ಸಿ.ಎ. ಹಾಗೂ ನಾದಿನಿ ಫಸಿಲಾ ಸಿ.ಎ. (29) ಅವರನ್ನು ಜುಲೈ 22ರಂದು ಸುಳ್ಯ ಠಾಣಾ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!