Friday, September 4, 2026
spot_imgspot_img
spot_imgspot_img

ಪಣಂಬೂರು: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು

- Advertisement -
- Advertisement -

ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿ ಪಲ್ಟಿಯಾಗಿರುವ ಘಟನೆ ಪಣಂಬೂರು ಎಂಸಿಎಫ್ ಬಳಿಯ ರಾ.ಹೆ.66ರಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಘಟನೆಯಿಂದ ಬೆಳ್ಳಣ್ ನಿವಾಸಿ ಆದಿತ್ಯ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಳಿದಂತೆ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚಿನ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ಪಲ್ಟಿಯಾದ ಬಸ್‌ ನಲ್ಲಿದ್ದವರನ್ನು ಹೊರತೆಗೆದು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ.ಘಟನೆ ಸಂಬಂಧ ಈ ವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!