Friday, November 20, 2026
spot_imgspot_img
spot_imgspot_img

ಪ್ರತಾಪ್ ಸಿಂಹ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ: ಕೋಮು ಪ್ರಚೋದನೆ ಆರೋಪದ ವಿಚಾರಣೆ ಮುಂದುವರಿಕೆ

- Advertisement -
- Advertisement -

ಬೆಂಗಳೂರು: ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಪ್ರತಾಪ್ ಸಿಂಹ ಮತ್ತಿತರರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಇತ್ತೀಚೆಗೆ ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಈ ಆದೇಶ ಮಾಡಿದೆ.

ದೂರಿನಲ್ಲಿರುವ ಅಂಶಗಳು ಮತ್ತು ಪ್ರತಾಪ ಸಿಂಹ ಅವರ ಭಾಷಣದ ನಿರ್ದಿಷ್ಟ ಅಂಶಗಳನ್ನು ಗಮನಿಸಿದರೆ, ಗಲಭೆಯನ್ನು ಪ್ರಚೋದಿಸುವ ಮತ್ತು ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರತಕ್ಕಂತಹ ಆರೋಪಗಳ ಕುರಿತು ಅವರ ವಿರುದ್ಧ ತನಿಖೆ ನಡೆಸುವ ಅಗತ್ಯವನ್ನು ಪ್ರಕರಣ ಸೂಚಿಸುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಇದೇ ವೇಳೆ, ಪ್ರತಾಪ್ ಸಿಂಹ ಅವರ ಹೇಳಿಕೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಪ್ರಕರಣದ ಇತರ ಆರೋಪಿಗಳಾದ ಕರಣ್, ಶಿವಕುಮಾರ್ ಮತ್ತು ಗುರುರಾಜ ವಿರುದ್ಧದ ವಿಚಾರಣೆಯನ್ನು ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.

- Advertisement -

Related news

error: Content is protected !!