Friday, August 7, 2026
spot_imgspot_img
spot_imgspot_img

ವಿಟ್ಲ: ಭಾರತ್ ಜೋಡೋ ಯುವ ಸಂಘ ರಚನೆ ಕುರಿತು ಇಂದು(ಆ.7) ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮಾಹಿತಿ ಸಭೆ

- Advertisement -
- Advertisement -

ವಿಟ್ಲ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರಚಿಸುವ ಸಂಬಂಧ ಮಾಹಿತಿ ನೀಡಲು ಇಂದು (ಆಗಸ್ಟ್ 7) ಬೆಳಿಗ್ಗೆ 10.30ಕ್ಕೆ ವಿಟ್ಲ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲೆಗಳ ಮುಖ್ಯಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.ಈ ಸಭೆಯಲ್ಲಿ ಸಂಬಂಧಿತ ಎಲ್ಲಾ ಆಹ್ವಾನಿತರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ವಿಟ್ಲ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!