Tuesday, November 3, 2026
spot_imgspot_img
spot_imgspot_img

ಹೈಟೆನ್ಷನ್ ತಂತಿ ತಗುಲಿ 8 ಕೂಲಿ ಕಾರ್ಮಿಕರು ಸಜೀವ ದಹನ!

- Advertisement -
- Advertisement -

ಜೈಪುರ: ರಾಜಸ್ಥಾನದ ಝುಂಜುನು ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿ ಎಂಟು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉದಯಪುರವಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಛಾಪೋಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ ದುರಂತದ ಕುರಿತು ಪೊಲೀಸರು ಮಾತನಾಡಿ, ಛಾಪೋಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಜಲ್ಲಿಕಲ್ಲು ಮಿಶ್ರಣ ಮಾಡಲು ಬಳಸುತ್ತಿದ್ದ ಯಂತ್ರವೊಂದು ಮೇಲ್ಮೈಯಲ್ಲಿ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ಲೈನ್‌ಗೆ ತಗುಲಿದೆ. ಇದರ ಪರಿಣಾಮವಾಗಿ ಯಂತ್ರಕ್ಕೆ ವಿದ್ಯುತ್ ಹರಿದು, ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿದೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು 11,000 ವೋಲ್ಟ್‌ನ ವಿದ್ಯುತ್ ಲೈನ್ ಆಗಿತ್ತು ಎಂದು ತಿಳಿದುಬಂದಿದೆ. ಸದ್ಯ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು, ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ನಂತರ ಮಾಜಿ ಸಚಿವ ರಾಜೇಂದ್ರ ಗುಧಾ ಮತ್ತು ಮಾಜಿ ಶಾಸಕ ಶುಭ್‌ಕರಣ್ ಚೌಧರಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಝುಂಜುನುದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆಗೆ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಸಿಎಂ ಮಾತನಾಡಿ, ಝುಂಜುನು ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕರು ಸಾವನ್ನಪ್ಪಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಗಾಯಗೊಂಡವರಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲು, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಮತ್ತು ಎಲ್ಲಾ ರೀತಿಯ ನೆರವು ಒದಗಿಸಲು ಹಾಗೂ ಘಟನೆಯ ತನಿಖೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ

- Advertisement -

Related news

error: Content is protected !!