- Advertisement -
- Advertisement -



ಬಂಟ್ವಾಳ: ವಿಟ್ಲ ಬಸವನಗುಡಿಯಲ್ಲಿರುವ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15, ಶನಿವಾರದಂದು ಆಚರಿಸಲಾಗುವುದು.
ಬೆಳಿಗ್ಗೆ 11:30 ರಿಂದ ಆರಂಭವಾಗುವ ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಜೆ.ಸಿ. ಡಿ. ಶ್ರೀಧರ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪುತ್ತೂರಿನ ಮಾಜಿ ಯೋಧ ಮಾಧವ ಬಿ.ಕೆ ಅವರು ಭಾಗವಹಿಸಲಿದ್ದಾರೆ.
ಇದೇ ವೇಳೆ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಾಯೋಜಿಸಲಾದ HVLS ಫ್ಯಾನ್ ಉದ್ಘಾಟನೆಯನ್ನು ಬ್ಯಾಂಕ್ ಅಧ್ಯಕ್ಷ ಎಚ್. ಜಗನ್ನಾಥ ಸಾಲಿಯಾನ್ ಅವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಶಾಲೆಯ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -







