Friday, October 30, 2026
spot_imgspot_img
spot_imgspot_img

ಪಂಜಿಮೊಗರು ರಾಕೇಶ್ ಕೊಲೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಮಂಗಳೂರು: ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿಯ ನಿವಾಸಿ ರಾಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸುನೀಲ್ ಕುಮಾರ್ ಯಾನೆ ಕೌಟಿ, ಪ್ರವೀಣ್ ಪೂಜಾರಿ ಯಾನೆ ಚೋಟು, ಪ್ರೀತಮ್ ಯಾನೆ ಅಭಿ ಹಾಗೂ ರೋಹಿತ್ ಕುಮಾರ್ ಯಾನೆ ಶೂಟರ್ ಶಿಕ್ಷೆಗೊಳಗಾದ ಆರೋಪಿಗಳು. 2019ರ ಜ.3ರಂದು ಸುನೀಲ್ ಕುಮಾರ್‌ನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಆರೋಪಿಗಳು ತಲವಾರಿನಿಂದ ಕಡಿದು ಕೊಲೆ ಮಾಡಿದ್ದರು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 1ರಿಂದ 3ನೇ ಆರೋಪಿಗಳಿಗೆ ಐಪಿಸಿ ಕಲಂ 302, 120(ಬಿ) ಜೊತೆಗೆ 34ರಡಿ ಜೀವಾವಧಿ ಶಿಕ್ಷೆ ಹಾಗೂ ತಲಾ 15 ಸಾವಿರ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ವಿಧಿಸಿದೆ.ನಾಲ್ವರು ಆರೋಪಿಗಳಿಗೆ ಐಪಿಸಿ ಕಲಂ 201 ಮತ್ತು 212 ಜೊತೆಗೆ 34ರಡಿ ತಲಾ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ನೀಡಲಾಗಿದೆ.

ಒಟ್ಟು 70 ಸಾವಿರ ರೂ. ದಂಡದಲ್ಲಿ 20 ಸಾವಿರ ರೂ. ಸರಕಾರಕ್ಕೆ ಹಾಗೂ 50 ಸಾವಿರ ರೂ. ಮೃತ ರಾಕೇಶ್ ಅವರ ತಂದೆಗೆ ನೀಡುವಂತೆ ನ್ಯಾಯಾಧೀಶ ರಾಜೇಶ್ ಮಾರುತಿ ಕಮಟೆ ಆದೇಶಿಸಿದ್ದಾರೆ. ಸರಕಾರಿ ಅಭಿಯೋಜಕ ಮೋತೀಲಾಲ್ ಚೌದರಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!