Monday, October 5, 2026
spot_imgspot_img
spot_imgspot_img

ಹಾಸನದಲ್ಲಿ ಡಿಸಿ-ಎಸ್ಪಿ ನಡುವೆ ಜಟಾಪಟಿ?-ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆ; ಎಸ್‌ಪಿಗೆ ಡಿಸಿ ಶಿಸ್ತು ಕ್ರಮದ ಎಚ್ಚರಿಕೆ

- Advertisement -
- Advertisement -

ಹಾಸನ : ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಹಾಸನನಗರದ ದೇವಿಗೆರೆ ಆವರಣದಲ್ಲಿ ಪೆಂಡಾಲ್ ಗೌರಿ-ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರಿಗೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ನೋಟಿಸ್‌ ಜಾರಿ ಮಾಡಿದ್ದಾರೆ.ಅಕ್ಟೋಬರ್ 3ರಂದು ನಿಷೇಧಾಜ್ಞೆ ಜಾರಿಯಲ್ಲಿದ್ದರೂ ದೇವಿಗೆರೆ ಆವರಣದಲ್ಲಿ ಪೆಂಡಾಲ್ ಗಣಪತಿ ಮೂರ್ತಿಗಳ ವಿಸರ್ಜನೆ ನಡೆದಿರುವುದು ಕಂಡುಬಂದಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳದೆ ಇರುವುದನ್ನು ಜಿಲ್ಲಾಧಿಕಾರಿಗಳು ಪ್ರಶ್ನಿಸಿದ್ದಾರೆ.ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನ ತೋರಿರುವುದು ಸರಕಾರಿ ನೌಕರರಿಗೆ ತರವಲ್ಲದ ರೀತಿಯಾಗಿದೆ ಎಂದು ನೋಟಿಸ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಅಲ್ಲದೆ, ವಹಿಸಲಾದ ಕಾರ್ಯವನ್ನು ನಿರ್ವಹಿಸದೇ ಉದ್ಧಟತನ ತೋರಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಎಸ್‌ಪಿ ಶುಭನ್ವಿತಾ ಅವರ ವಿರುದ್ಧ ಕರ್ತವ್ಯ ಲೋಪ ಹಾಗೂ ಉದ್ಧಟತನದ ಆರೋಪದಡಿ ಶಿಸ್ತು ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ಏಕೆ ಶಿಫಾರಸು ಮಾಡಬಾರದು ಎಂದು ಜಿಲ್ಲಾಧಿಕಾರಿ ಕಾರಣ ಕೇಳಿದ್ದಾರೆ.

ನೋಟಿಸ್‌ ತಲುಪಿದ ಕೂಡಲೇ ಖುದ್ದು ಹಾಜರಾಗಿ ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿದ್ದು, ಸೂಕ್ತ ಉತ್ತರ ನೀಡದಿದ್ದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ಎಚ್ಚರಿಕೆ ನೀಡಿದ್ದಾರೆ.ಈ ಬೆಳವಣಿಗೆಯಿಂದಾಗಿ ಹಾಸನ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ನಡುವೆ ಗಣಪತಿ ವಿಸರ್ಜನೆ ವಿಚಾರವಾಗಿ ಅಸಮಾಧಾನ ಮೂಡಿದೆಯೇ? ಎಂಬ ಚರ್ಚೆ ಜಿಲ್ಲೆಯಲ್ಲಿ ಆರಂಭವಾಗಿದೆ.

- Advertisement -

Related news

error: Content is protected !!