- Advertisement -
- Advertisement -
ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಹಡಹಗಲೇ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದರು.

ಬಂಧಿತ ಆರೋಪಿಗಳನ್ನು ಮನೋಜ್ ಕುಲಾಲ್(37) , ಚಿತ್ತರಂಜನ್ ಪೂಜಾರಿ(27), ಚೇತನ್(32), ರಮೇಶ್ ಪೂಜಾರಿ(38), ದೀಕ್ಷಿತ್ ಶೆಟ್ಟಿ(29) ಎನ್ನಲಾಗಿದೆ.

ಬಂಧಿತ ಆರೋಪಿಗಳಲ್ಲಿ ನಾಲ್ವರು ಆರೋಪಿಗಳ ವಿರುದ್ಧ ಈಗಾಗಲೇ ಹಲವು ಠಾಣೆಗಳಲ್ಲಿ ಕೊಲೆ, ದರೋಡೆ, ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ.

ಅದಲ್ಲದೆ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಟ್ಟು ಮೂರು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -








