- Advertisement -
- Advertisement -
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಜಿರೆಯ ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಪಿಡಿಓ ಆದೇಶ ಹೊರಡಿಸಿದ್ದಾರೆ. ನಾಗೇಶ್ ಅಮಾನತಾದ ಉಜಿರೆ ಗ್ರಾಮ ಪಂಚಾಯತ್ ಸಿಬ್ಬಂದಿ.
ಪೂಂಜಾ ಅವರ ಚುನಾವಣಾ ಪ್ರಚಾರ ಹಾಗೂ ವಿಜಯೋತ್ಸವದಲ್ಲಿ ಪಂಚಾಯಿತಿ ಸಿಬ್ಬಂದಿ ನಾಗೇಶ್ ಬಿಜೆಪಿ ಬಾವುಟ ಹಿಡಿದು ತಿರುಗುವ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆ ಸೇವೆಯಿಂದ ಅಮಾನತು ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಹುದ್ದೆಯಲ್ಲಿರುವವರು ಯಾವುದೇ ರಾಜಕೀಯ ಪಕ್ಷದ ಪರವಾಗಿ ತೊಡಗಿಸಿಕೊಳ್ಳಬಾರದು ಎಂದು ನಿಯಮವಿದ್ದರೂ ಅದನ್ನು ಮೀರಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಮತಯಾಚನೆ ಮತ್ತು ವಿಜಯೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
- Advertisement -