Saturday, June 20, 2026
spot_imgspot_img
spot_imgspot_img

ಮಂಗಳೂರು: ಬೈಕ್ ಮತ್ತು ಕಾರು ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಮಂಗಳೂರು: ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ತಾಲೂಕಿನ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ನಡೆದಿದೆ.

ಕಾರು ಯೂಟರ್ನ್ ತೆಗೆದುಕೊಳ್ಳುವಾಗ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಿಂಬದಿ ಸವಾರ ಮೇಲೆ ಹಾರಿ‌ ಕೆಳಗೆ ಬಿದ್ದಿದ್ದಾನೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಕಾಲು, ತಲೆ ಭಾಗಕ್ಕೆ ಗಾಯವಾಗಿದೆ.

ಗಾಯಾಳುಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಿಂದ ಬೈಕ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!