- Advertisement -
- Advertisement -
ದುಬೈ: ಐಪಿಎಲ್ ಟೂರ್ನಿಯ 10ನೇ ಪಂದ್ಯದಲ್ಲಿಂದು ಮದಗಜಗಳ ಕಾದಾಟ. ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ, ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಇಂದು ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾ ನಾಯಕ ಹಾಗೂ ಉಪನಾಯಕನ ನಡುವಿನ ಕಾದಾಟಕ್ಕೆ ದುಬೈ ಅಂತರಾಷ್ಟ್ರೀಯ ಮೈದಾನ ಸಾಕ್ಷಿಯಾಗ್ತಿದೆ.
ಆರಂಭಿಕ ಪಂದ್ಯದಲ್ಲಿ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, 2ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಹೀನಾಯ ಸೋಲು ಕಂಡಿದೆ. ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ್ದ ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಕಮ್ಬ್ಯಾಕ್ ಮಾಡಿದೆ. ಗೆಲುವಿನ ಲಯಕ್ಕೆ ಮರಳಲು ಆರ್ಸಿಬಿ ತವಕಿಸುತ್ತಿದ್ರೆ, ಮುಂಬೈ ಇಂಡಿಯನ್ಸ್ ಜಯದ ವಿಶ್ವಾಸದಲ್ಲಿದೆ.
- Advertisement -