Saturday, June 28, 2025
spot_imgspot_img
spot_imgspot_img

ಕಡಬ : ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ದಾರುಣ ಸಾವು

- Advertisement -
- Advertisement -

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಜೂ.1ರಂದು ಕಡಬದಲ್ಲಿ ನಡೆದಿದೆ.

ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಡಬ ಮುಳಿಮಜಲು ಎಂಬಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್‌ ದ್ಯಾಮಣ್ಣರಿಗೆ ವಿದ್ಯುತ್‌ ಶಾಕ್ ಹೊಡೆದಿದ್ದು ಕಂಬದಲ್ಲೇ ಕೆಲ ಹೊತ್ತು ಬಾಕಿಯಾಗಿದ್ದರು ಎನ್ನಲಾಗಿದೆ. ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

Related news

error: Content is protected !!