Sunday, June 29, 2025
spot_imgspot_img
spot_imgspot_img

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆ

- Advertisement -
- Advertisement -

6 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕ ಭೀಕರವಾಗಿ ಕೊಲೆಯಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಯುವಕ ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾಗಿದ್ದಾನೆ. ಮೃತ ಯುವಕನಿಗೆ ಜೂನ್‌ 7 ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು.

ನಿಂಗಪ್ಪ ತೋಟದ ಮನೆಯಲ್ಲಿದ್ದಾಗ ಮಧ್ಯರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!