- Advertisement -
- Advertisement -
ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಾಣಾಜೆ ಮಹಾ ಶಕ್ತಿಕೇಂದ್ರದ ಬಿಜೆಪಿಯ ಮಹಾ ಸಭೆ ಸಂಪ್ಯ ಅನ್ನಪೂರ್ಣೇಶ್ವರಿ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ರಾಜೀವ ಭಂಡಾರಿ, ದೇವ ಪೂಜಾರಿ, ಪಾಣಾಜೆ ಮಹಾ ಶಕ್ತಿಕೇಂದ್ರದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಕಾರ್ಯಕರ್ತರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಹೇಗೆ ತಯಾರಿ ನಡೆಸಬೇಕೆಂದು ಸಮಾಲೋಚಿಸಲಾಯಿತು.

- Advertisement -








