Sunday, June 29, 2025
spot_imgspot_img
spot_imgspot_img

ಹಾಸ್ಟೇಲ್‌ನಲ್ಲಿ ಬಾಲಕಿ ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ 13 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಾಗರದಲ್ಲಿ ನಡೆದಿದೆ.

ಖಾಸಗಿ ವಸತಿ ವಿದ್ಯಾಲಯವೊಂದರಲ್ಲಿ ಸೊರಬ ತಾಲೂಕಿನ ಶಿವಪುರದ ತೇಜಸ್ವಿನಿ (13) ಎಂಟನೆ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬೆಳಗ್ಗೆ ವಿದ್ಯಾರ್ಥಿನಿ ವಸತಿ ಶಾಲೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಶಾಲಾ ವಾಹನದಲ್ಲಿ ಉಪವಿಭಾಗೀಯ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಶವ ಪರೀಕ್ಷೆಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ವಿದ್ಯಾರ್ಥಿನಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ ಶಾಲಾ ಮುಖ್ಯಸ್ಥ ಎಚ್.ಪಿ.ಮಂಜಪ್ಪ, ಐದು ದಿನಗಳ ಹಿಂದೆ 8ನೇ ತರಗತಿಗೆ ತೇಜಸ್ವಿನಿ ಅವರನ್ನು ದಾಖಲಿಸಿಕೊಳ್ಳಲಾಗಿತ್ತು. ವಿದ್ಯಾರ್ಥಿನಿ ಬಂದು ಐದು ದಿನವಾಗಿರುವುದರಿಂದ ಅವಳ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಬಳಿ ಇಲ್ಲ. ಸಾವಿಗೆ ನಿಖರ ಕಾರಣ ಏನೆಂದು ತಿಳಿದುಕೊಳ್ಳಲು ವೈದ್ಯರು ಮರಣೋತ್ತರ ಪರೀಕ್ಷೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಸುವುದಾಗಿ ತಿಳಿಸಿದ್ದಾರೆ. ಪೊಲೀಸರ ತನಿಖೆಗೆ ನಮ್ಮ ಸಂಸ್ಥೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಯಾವುದೇ ಲೋಪವಾಗಿಲ್ಲ. ಪೋಸ್ಟ್‌ಮಾರ್ಟಮ್ ವರದಿ ನಂತರ ಸತ್ಯಾಂಶ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!