Saturday, June 6, 2026
spot_imgspot_img
spot_imgspot_img

ಪಾದಾಚಾರಿಗೆ ಢಿಕ್ಕಿ ಹೊಡೆದ ಬಸ್ಸು; ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಕುಂದಾಪುರ: ರಸ್ತೆ ದಾಟಲು ನಿಂತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಸಾಸ್ತಾನ ಮೂಲದ ರಾಜು ಪೂಜಾರಿ ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ವೇಳೆ ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆಯ ಡಿವೈಡರ್‌ ಬಳಿ ರಸ್ತೆಯ ಅಂಚಿನಲ್ಲಿ ರಾಜು ಪೂಜಾರಿ ರಸ್ತೆ ದಾಟಲು ನಿಂತಿದ್ದರು.

ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಬಸ್‌ ಅವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!