Tuesday, July 1, 2025
spot_imgspot_img
spot_imgspot_img

ಬೈಕ್ ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಮದುವೆಯಾಗಿ 24 ದಿನಕ್ಕೆ ದುರಂತ ಅಂತ್ಯ ಕಂಡ ನವವಿವಾಹಿತ ಜೋಡಿ

- Advertisement -
- Advertisement -

ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವವಿವಾಹಿತ ಜೋಡಿಯೊಂದು ರಸ್ತೆಯಲ್ಲಿಯೇ ಅನಾಥವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾದ 24 ದಿನಗಳಲ್ಲೆ ನವಜೋಡಿ ದುರ್ಮರಣ ಕಂಡಿದ್ದಾರೆ.

ವಿಜಯಪುರ ನಗರದ ಹೊರವಲಯದ ಸೋಲಾಪುರ ಬೈಪಾಸ್ ಬಳಿ ತಡರಾತ್ರಿ ಘಟನೆ ನಡೆದಿದೆ. ಮೃತರನ್ನು ಹೊನಮಲ್ಲ ತೇರದಾಳ (31), ಅವರ ಪತ್ನಿ ಗಾಯತ್ರಿ (24) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಮೃತ ಯುವಕ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದನು. ಕಳೆದ ಮೇ 22 ರಂದು ಹೊನಮಲ್ಲ ಹಾಗೂ ಗಾಯತ್ರಿ ವಿವಾಹವಾಗಿತ್ತು. ಈಗ ಮದುವೆಯಾಗಿ 24 ದಿನಗಳಲ್ಲಿ ರಾತ್ರಿ ವೇಳೆ ಪಕ್ಕದ ಊರಿಗೆ ಹೋಗುವಾಗ ಕ್ಯಾಂಟರ್‌ ಡಿಕ್ಕಿಯಾಗಿ ರಸ್ತೆಯಲ್ಲಿಯೇ ಭೀಕರವಾಗಿ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!