Saturday, June 28, 2025
spot_imgspot_img
spot_imgspot_img

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೋಲಿಸ್ ದೌರ್ಜನ್ಯ ಪ್ರಕರಣ -ಅಮಾನತುಗೊಂಡಿದ್ದ ಪಿಎಸ್‌ಐ ಪಿಸಿ ವರ್ಗಾವಣೆ

- Advertisement -
- Advertisement -

ಪುತ್ತೂರು: ಬ್ಯಾನರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಒಳಗಾದ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀನಾಥ್ ರೆಡ್ಡಿಯವರನ್ನು ಹೊರ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಅದರಂತೆ ಅವರು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಾನ್‌ಸ್ಟೇಬಲ್ ಹರ್ಷಿತ್‌ ಅವರಿಗೆ ಸೆನ್ ವಿಭಾಗಕ್ಕೆ ವರ್ಗಾಯಿಸಲಾಗಿತ್ತಾದರೂ ಅವರು ಕರ್ತವ್ಯಕ್ಕೆ ಹಾಜರಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ದೌರ್ಜನ್ಯಕ್ಕೊಳಗಾದ ಯುವಕ ಅವಿನಾಶ್ ತಂದೆ ವೇಣುನಾಥ ನರಿಮೊಗರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಡಿ ವೈ ಎಸ್ ಪಿ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್‌ಐ ಶ್ರೀನಾಥ್ ರೆಡ್ಡಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಗೆ ವಹಿಸಲಾಗಿತ್ತು. ಈ ನಡುವೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿಯಂತೆ ಪಿಎಸ್‌ಐ ಮತ್ತು ಪಿಸಿಗೆ ವರ್ಗಾವಣೆಯಾಗಿದೆ.

- Advertisement -

Related news

error: Content is protected !!