Saturday, June 28, 2025
spot_imgspot_img
spot_imgspot_img

ಪುತ್ತೂರು : 7 ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಪತ್ನಿ ಆತ್ಮಹತ್ಯೆ..!

- Advertisement -
- Advertisement -

ಪುತ್ತೂರು: ಏಳು ವರ್ಷಗಳ ಹಿಂದೆ ಪತಿ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲೇ ಇದೀಗ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಇಂದಿರಾ ನಗರ ಎಂಬಲ್ಲಿ ನಡೆದಿದೆ.

ಮೃತರನ್ನು ಇಲ್ಲಿನ ದಿ.ಪ್ರವೀಣ್ ಎಂಬವರ ಪತ್ನಿ ಕಾವ್ಯಾ(38) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಏಳು ವರ್ಷಗಳ ಹಿಂದೆ ಅವರ ಪತಿ ಪ್ರವೀಣ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡ ಅದೇ ಸ್ಥಳದಲ್ಲಿ ಕಾವ್ಯಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂ.30ರಂದು ಕಾವ್ಯಾರ ಪುತ್ರ ಪ್ರತೀಕ್ ಬೆದ್ರಾಳ ಸಮೀಪ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆಗೈದಿದ್ದಾರೆ.

- Advertisement -

Related news

error: Content is protected !!