Sunday, June 7, 2026
spot_imgspot_img
spot_imgspot_img

ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾದ ಮಗಳು; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ತಾಯಿ

- Advertisement -
- Advertisement -

ಪ್ರೀತಿಯಿಂದ ಸಾಕಿ ಸಲಹಿದ್ದ ಮಗಳು ಪ್ರಿಯಕರನ ಜತೆ ಓಡಿ ಹೋಗಿ ಮದುವೆಯಾಗಿದ್ದರಿಂದ ಮನನೊಂದ ತಾಯಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದ ಹದ್ಲಿ ರಸ್ತೆಯ ಬ್ಯಾಂಕ್ ಆಫ್ ಬರೋಡ ಬಳಿಯ ನಿವಾಸಿ, ಅಂಗನವಾಡಿ ಶಿಕ್ಷಕಿ ಸುನೀತಾ (48) ಆತ್ಮಹತ್ಯೆಗೆ ಶರಣಾದ ಮಹಿಳೆ.

ಪ್ರೀತಿ, ಸಲುಗೆಯಿಂದ ಬೆಳೆದಿದ್ದ ಮಗಳು ಶಿರೋಳ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಓಡಿ ಹೋಗಿದ್ದಳು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ನೊಂದಿದ್ದ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ತಿಂಗಳ ಹಿಂದೆ ಮಗಳು ಅದೇ ಏರಿಯಾದ ಯುವಕನೊಬ್ಬನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದಳು. ಮಗಳು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ತಾಯಿ ಸುನೀತಾ ತನ್ನ ಸಹೋದರಿಯ ಮನೆ ಮುಂದಿರುವ (ಸ್ಟೇರ್ ಕೇಸ್) ಮಳಿಗೆ ಹತ್ತುವು ಮೆಟ್ಟಿಲುಗಳ ಪೈಪ್ ಗೆ ಸೀರೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!