Saturday, August 22, 2026
spot_imgspot_img
spot_imgspot_img

ದಕ್ಷಿಣ ಕನ್ನಡದಲ್ಲಿ  ನಿಲ್ಲದ ಮಳೆ, ಶಾಲಾ ಕಾಲೇಜುಗಳಿಗೆ ( ಜುಲೈ 7)ರಜೆ  ಮುಂದುವರಿಕೆ

- Advertisement -
- Advertisement -

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಆರೆಂಜ್​​ ಅಲರ್ಟ್ ಘೋಷಣೆ ಮಾಡಲಾಗಿದೆ . ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಸರ್ಕಾರಿ,ಖಾಸಗಿ, ಅನುದಾನಿತ, ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ನಾಳೆಯೂ (ಶುಕ್ರವಾರ) ರಜೆ ಘೋಷಣೆ ಮಾಡಿದೆ.

ಗ್ರಾಮೀಣ ಪ್ರದೇಶದಿಂದ ಪದವಿ ತರಗತಿಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ಅನಾನುಕೂಲವಾದಲ್ಲಿ ಅವರಿಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಆನ್​ಲೈನ್​ ತರಗತಿ ಮೂಲಕ ಕ್ಲಾಸ್​ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕೆರೆ, ನದಿ , ಸಮುದ್ರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೇಂದ್ರ ಸ್ಥಾನದಲ್ಲಿದ್ದು ಕೈಗೊಳ್ಳಬೇಕು.

- Advertisement -

Related news

error: Content is protected !!